Da Ra Bendre Poems Kannada PDF
Dattatreya Ramachandra Bendre (31 January 1896 – 26 October 1981), popularly known as Da Ra Bendre, is generally considered the greatest Kannada lyric poet of the 20th century and one of the greatest poets in the history of Kannada literature.
ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿಯಂದು ಪ್ರಸಿದ್ಧರಾಗಿದ್ದಾರೆ. 1973 ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೇಂದ್ರೆಯವರು ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು
ದ ರಾ ಬೇಂದ್ರೆ ಕವನಗಳು | The Ra Bendre Poems in Kannada
ಅಗೋ ಅಲ್ಲಿ ದೂರದಲ್ಲಿ
ನೆಲದ ಮುಗಿಲ ಮಗ್ಗುಲಲ್ಲಿ
ಹಸಿರಿನ ಹಸುಗೂಸದೊಂದು
ಆಗ ಈಗ ಹೊರಳುತಿಹುದು
ಏನೊ ಎಂತೊ ಒರಲುತಿಹುದು
ಆs ಹಸಿರ ಒಳಗೆ ಹೊರಗೆ
ನೀರ ಬೆಳಕು ತುಣುಕು ಮಿಣುಕು
ಅಲ್ಲಿನಿಂದ ಬಂದೆಯಾ !
ಕುಣಿವ ಮಣಿವ ಹೆಡೆಯ ಹಾವುಗಳನು ಹಿಡಿದು ತಂದೆಯಾ ?
ಏಕೆ ಬಂದೆ ? ಏನು ತಂದೆ?
ಹೇಳೊ ಹೇಳು ಶ್ರಾವಣಾ
ನೀನು ಬಂದ ಕಾರಣಾ
ಪಡುವ ದಿಕ್ಕಿನಿಂದ ಹರಿವಗಾಳಿ
ಕುದುರೆಯನ್ನು ಏರಿಪರ್ಜನ್ಯ ಗೀತವನ್ನು
ಹಾsಡುತ್ತ ಬಂದಿತು
ಬನದ ಮನದ ಮೇಳವೆಲ್ಲ
ಸೋs ಎಂದು ಎಂದಿತು
ಬಿದಿರ ಕೊಳಲ ನುಡಿಸಿತು
ಮಲೆಯ ಹೆಳಲ ಮುಡಿಸಿತು
ಬಳ್ಳಿ ಮಾಡ ಬಾಗಿಸಿತ್ತು
ಗಿಡಗಳ ತಲೆದೂಗಿಸಿತ್ತು
ಮರದ ಹನಿಯ ಮಣಿಗಳನ್ನು
ಅತ್ತ ಇತ್ತ ತೂರುತಾ
ಹಸಿರು ಮುರಿದ ತೊಂಗಲನ್ನು
ಕೆಳಗೆ ಮೇಲೆ ತೂಗುತಾ
ಬರುವ ನಿನ್ನ ಅಂದ ಚೆಂದ
ಸೂಸು ಸೊಗಸು ಆನಂದ
ನೀನು ನಡೆದ ಬಂದ ಮಾಸ
ಹೆಣ್ಗೆ ತವರು ಮನೆಯ ಮಾಸ
ಬರಿಯ ಆಟ, ಬರಿಯ ಹಾಸ
ಮಧುಮಾಸಕು ಹಿರಿದದು
ಮಧುರಮಾಸ ಸರಿಯದು
ಮೋಡಗವಿದ ಕಣ್ಣಿನವನು
ಮುದಿಯ ತಂದೆ ಮುಗಿಲರಾಯ
ನಿನ್ನನ್ನೆ ಬಯಸಿದಾ
ಕಣ್ಣು ಕೆನ್ನೆ ತೊಯ್ಸಿದಾ
ಬಿಸಿಲಹಣ್ಣ ತಿಂದು ಹೊತ್ತು
ಹೆತ್ತ ನಿನ್ನ ಭೂಮಿತಾಯಿ
ಪಾಪ, ನಿನ್ನ ನೆನಸಿತು
ಎದೆಯ ಸೆರಗು ನನೆಸಿತು
ಅಂತೆ ಬಂದೆ ಬಾರಣಾ
ಬಾರೊ ಮಗುವೆ ಶ್ರಾವಣಾ!
You can download the Da Ra Bendre Poems in Kannada PDF using the link given below.